ADVERTISEMENT

ಸಂದೇಶ್‌ಖಾಲಿ| ಮಹಿಳಾ ಸಿಎಂ ಆಡಳಿತದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವೇ? ಠಾಕೂರ್

ಪಿಟಿಐ
Published 24 ಫೆಬ್ರುವರಿ 2024, 9:35 IST
Last Updated 24 ಫೆಬ್ರುವರಿ 2024, 9:35 IST
<div class="paragraphs"><p>ಮಮತಾ ಬ್ಯಾನರ್ಜಿ</p></div>

ಮಮತಾ ಬ್ಯಾನರ್ಜಿ

   

ಹಮೀರ್‌ಪುರ: ದೇಶದ ಏಕಮಾತ್ರ ಮಹಿಳಾ ಮುಖ್ಯಮಂತ್ರಿ ಆಡಳಿತ ನಡೆಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವಾದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಪ್ರಶ್ನೆ ಉದ್ಭವಿಸುತ್ತದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಭೋಟಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಠಾಕೂರ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ADVERTISEMENT

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಮಾತನಾಡಿದ ಅವರು, ಸಂದೇಶ್‌ಖಾಲಿಯಲ್ಲಿ ಅಮಾಯಕರನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ಎಸೆಯಲಾಗಿದೆ. ಪರಿಸ್ಥಿತಿ ನಿಭಾಯಿಸಲು ಅಲ್ಲಿನ ಸರ್ಕಾರ ಏನೂ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿಯಲ್ಲಿ ಟಿಎಂಸಿ ಮುಖಂಡ ಶಾಜಹಾನ್ ಶೇಖ್ ಮತ್ತು ಅವರ ಬೆಂಬಲಿಗರು ಭೂ ಕಬಳಿಕೆ ಹಾಗೂ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಯಲಾಗಿದೆ ಎಂದು ಆರೋಪಿಸಿದ ನಂತರದಲ್ಲಿ ರಾಜಕೀಯ ಗದ್ದಲ ಭುಗಿಲೆದ್ದಿದೆ.

ಪ್ರಮುಖ ಆರೋಪಿ ಶಾಜಹಾನ್ ಶೇಖ್‌ನನ್ನು ಬಂಧಿಸಲು ಪೊಲೀಸರು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಸ್ಥಳೀಯರು ಶುಕ್ರವಾರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಮಹಿಳಾ ನಾಯಕಿರನ್ನು ಹಿಂಸಾಚಾರ ಪೀಡಿತ ಸಂದೇಶ್‌ಖಾಲಿಗೆ ಹೋಗದಂತೆ ಅಲ್ಲಿನ ಪೊಲೀಸರು ತಡೆದಿರುವುದರೊಂದಿಗೆ ರಾಜಕೀಯ ಹಣಾಹಣಿ ತೀವ್ರಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.