ಮುಂಬೈ: ವಯೋಸಹಜ ಕಾಯಿಲೆಯಿಂದಾಗಿ ಬಿಜೆಪಿ ಹಿರಿಯ ನಾಯಕಿ ಹಾಗೂ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ತಾಯಿ ಚಂದ್ರಕಾಂತ ಗೋಯಲ್ ಅವರು ಶುಕ್ರವಾರ ರಾತ್ರಿ ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಸಚಿವ ಗೋಯಲ್ ಟ್ವೀಟ್ ಮಾಡಿದ್ದು, 'ನನ್ನ ತಾಯಿಯು ತನ್ನ ಸಂಪೂರ್ಣ ಜೀವನವನ್ನು ಜನರ ಸೇವೆಗಾಗಿ ಮುಡಿಪಾಗಿಟ್ಟಿದ್ದರು. ಅಲ್ಲದೇ ಅವರ ಕಾರ್ಯವೈಖರಿಯಿಂದ ಬೇರೆಯವರಿಗೂ ಜನರ ಸೇವೆ ಮಾಡುವಂತೆ ಪ್ರೇರೇಪಿಸಿದ್ದರು' ಎಂದು ತಿಳಿಸಿದ್ದಾರೆ.
ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿಕೆಯಾದ ಸಂದರ್ಭದಲ್ಲಿ ಚಂದ್ರಕಾಂತ ಗೋಯಲ್ ಅವರು ಮೊದಲ ಬಾರಿಗೆ ಮುಂಬೈ ಪಾಲಿಕೆಯ ಕಾರ್ಪೋರೇಟರ್ ಆಗಿ ಆಯ್ಕೆಯಾಗಿದ್ದರು. ಬಳಿಕ ಬಿಜೆಪಿ ಸೇರಿದ್ದ ಅವರು, ಮುಂಬೈನ ಮಾತುಂಗ ವಿಧಾನಸಭೆಯಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.