ಅಶ್ವಿನಿ ವೈಷ್ಣವ್
–ಪಿಟಿಐ ಚಿತ್ರ
ನವದೆಹಲಿ: ‘ರೈಲುಗಳ ಸ್ಲೀಪರ್ ಹಾಗೂ 3 ಹವಾನಿಯಂತ್ರಿತ ಕೋಚ್‌ಗಳಲ್ಲಿ ಹಿರಿಯ ನಾಗರಿಕರಿಗೆ ರಿಯಾಯಿತಿ ನೀಡುವುದನ್ನು ಪರಿಗಣಿಸಬೇಕು ಎಂದು ರೈಲ್ವೆ ಇಲಾಖೆಯ ಸ್ಥಾಯಿ ಸಮಿತಿ ಸಲಹೆ ನೀಡಿದೆ’ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
‘ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ರಿಯಾಯಿತಿ ಮುಂದುವರಿಸಬೇಕು ಎಂದು ಕೆಲವು ಸಂಸದರು ಧ್ವನಿಯೆತ್ತಿದ್ದರು. ಸ್ಥಾಯಿ ಸಮಿತಿಯು ಕೂಡ ಈ ವಿಚಾರದಲ್ಲಿ ಶಿಫಾರಸುಗಳನ್ನು ಮಾಡಿದೆ’ ಎಂದು ಸಚಿವ ವೈಷ್ಣವ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
‘ರೈಲ್ವೆ ಇಲಾಖೆಯು ಸಮಾಜದ ಎಲ್ಲಾ ಸ್ತರಗಳಿಗೆ ಕೈಗೆಟಕುವ ದರದಲ್ಲಿ ಸೇವೆಯನ್ನು ಒದಗಿಸಲು ಶ್ರಮಿಸುತ್ತಿದೆ. 2023–24ರಲ್ಲಿ ಪ್ರಯಾಣಿಕರ ಟಿಕೆಟ್‌ಗಾಗಿಯೇ ₹60,446 ಕೋಟಿ ಸಬ್ಸಿಡಿ ನೀಡಿದೆ. ಪ್ರತಿ ಪ್ರಯಾಣಿಕನ ರೈಲು ಪ್ರಯಾಣ ವೆಚ್ಚದಲ್ಲಿ ಶೇಕಡ 45ರಷ್ಟು ರಿಯಾಯಿತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು.
‘₹100 ಟಿಕೆಟ್‌ಗೆ ಕೇವಲ ₹55 ಪಡೆಯಲಾಗುತ್ತಿದೆ. ಎಲ್ಲ ಪ್ರಯಾಣಿಕರಿಗೂ ಸಬ್ಸಿಡಿ ನೀಡಲಾಗುತ್ತಿದೆ‘ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.