ADVERTISEMENT

ಜೆಎನ್‌ಯು ಪರಿಸರದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿ: ಪ್ರಧಾನಿಗೆ ಪತ್ರ

ಪಿಟಿಐ
Published 29 ಜನವರಿ 2023, 14:14 IST
Last Updated 29 ಜನವರಿ 2023, 14:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ದೆಹಲಿಯ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಪರಿಸರದಲ್ಲಿ ಪ್ರತಿಭಟನೆ ನಡೆದಾಗ ಮುನಿರ್ಕಾ ವಿಹಾರ್ ಪ್ರದೇಶದಲ್ಲಿ ವಾಸಿಸುವ ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿದೆ’ ಎಂದು ಹಿರಿಯ ನಾಗರಿಕರ ವೇದಿಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

ಈ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಅಪರಿಚಿತ ವ್ಯಕ್ತಿಗಳು ತಮ್ಮ ಮನೆಯ ಬಾಗಿಲು ಬಡಿದು ಶೌಚಾಲಯ ಬಳಸಿಕೊಳ್ಳಲು ಅನುವು ಮಾಡಿಕೊಡಬೇಕೆಂದು ಕೋರುತ್ತಾರೆ. ಆದ್ದರಿಂದ ಈ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು ಮತ್ತು ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಸ್ಥಾಪಿಸಬೇಕು ಎಂದೂ ಬೇಡಿಕೆ ಮುಂದಿಟ್ಟಿದ್ದಾರೆ.

ಸಾರ್ವಜನಿಕ ಶೌಚಾಲಯ ಇಲ್ಲದ ಕಾರಣ ಪ್ರತಿಭಟನಾ ಸ್ಥಳಕ್ಕೆ ಬರುವ ಮಹಿಳಾ ಪತ್ರಕರ್ತೆಯರು, ಪೊಲೀಸರಿಗೂ ತೊಂದರೆಯಾಗುತ್ತದೆ ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.