ADVERTISEMENT

ಅಹಮದ್ ಪಟೇಲ್‌ ಆರೋಗ್ಯ ಸ್ಥಿತಿ ಗಂಭೀರ

ಪಿಟಿಐ
Published 15 ನವೆಂಬರ್ 2020, 20:38 IST
Last Updated 15 ನವೆಂಬರ್ 2020, 20:38 IST
   

ನವದೆಹಲಿ : ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅಹಮದ್ ಪಟೇಲ್‌ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇಲ್ಲಿನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

71 ವರ್ಷದ ಅವರಿಗೆ ವಾರದ ಹಿಂದೆ ಕೋವಿಡ್ ದೃಢಪಟ್ಟಿತ್ತು. ಭಾನುವಾರ ಪಟೇಲ್ ಅವರ ಪುತ್ರ ಫೈಸಲ್ ಟ್ವೀಟ್ ಮಾಡಿದ್ದು, ‘ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ವೈದ್ಯಕೀಯ ಆರೈಕೆಯಲ್ಲಿದ್ದಾರೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.