ADVERTISEMENT

ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥರಾಗಿ ದಿನಕರ್‌ ಗುಪ್ತಾ ನೇಮಕ

ಪಿಟಿಐ
Published 23 ಜೂನ್ 2022, 15:44 IST
Last Updated 23 ಜೂನ್ 2022, 15:44 IST
   

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ದಿನಕರ್ ಗುಪ್ತಾ ಅವರನ್ನು ಗುರುವಾರ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮಹಾ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ತಿಳಿಸಿದೆ.

ಪಂಜಾಬ್ ಕೇಡರ್‌ನ 1987ನೇ ಬ್ಯಾಚ್‌ ಐಪಿಎಸ್‌ ಅಧಿಕಾರಿ ಗುಪ್ತಾ ಅವರ ನೇಮಕಾತಿಯನ್ನು ಸಂಪುಟ ಸಭೆ ಅನುಮೋದಿಸಿದ್ದು, 2024ರ ಮಾರ್ಚ್‌ 31ರವರೆಗೆ ಮುಖ್ಯಸ್ಥರಾಗಿರುತ್ತಾರೆ.

ಛತ್ತೀಸಗಡ ಕೇಡರ್‌ನ 1987ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಸ್ವಾಗತ್‌ ದಾಸ್‌ ಅವರನ್ನು ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ (ಆಂತರಿಕ ಭದ್ರತೆ)ಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.