ಸಾಂದರ್ಭಿಕ ಚಿತ್ರ
ತ್ರಿಶೂರ್ (ಕೇರಳ): 52 ವರ್ಷದ ಹಿರಿಯ ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಡಕ್ಕಂಚೇರಿ ಬಳಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ಮೃತರನ್ನು ಕಂಟ್ರೋಲ್ ರೂಂನಲ್ಲಿ ನಿಯೋಜಿಸಲಾಗಿದ್ದ ಹಿರಿಯ ಸಿಪಿಒ ರಮೇಶ್ ಬಾಬು ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ದೊರೆತಿಲ್ಲ. ಆದರೂ ಘಟನೆ ಕುರಿತು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.