ನವದೆಹಲಿ: ‘ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಸೇವಾ ಶುಲ್ಕ ನೀಡುವುದು ಸ್ವಯಂಪ್ರೇರಿತವಾಗಿದ್ದು, ಅದನ್ನು ಕಡ್ಡಾಯಗೊಳಿಸುವಂತಿಲ್ಲ’ ಎಂದು ದೆಹಲಿ ಹೈಕೋರ್ಟ್ ಶುಕ್ರವಾರ ಹೇಳಿದೆ.
ಸೇವಾ ಶುಲ್ಕ ವಿಧಿಸುವುದನ್ನು ನಿಷೇಧಿಸಿ ಕೇಂದ್ರೀಯ ಗ್ರಾಹಕರ ರಕ್ಷಣಾ ಪ್ರಾಧಿಕಾರವು ಇತ್ತೀಚೆಗೆ ಮಾರ್ಗದರ್ಶಿ ನಿಯಮಗಳನ್ನು ಪ್ರಕಟಿಸಿತ್ತು. ಇದನ್ನು ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರ ಸಂಘವು ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್ ‘ಸೇವಾ ಶುಲ್ಕ ಕಡ್ಡಾಯವಲ್ಲ’ ಎಂದು ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.