ADVERTISEMENT

ಮಹದಾಯಿ ಪ್ರವಾಹ್‌ ರಚನೆ: ಪ್ರಮೋದ್‌ ಸಾವಂತ್ ಸ್ವಾಗತ

​ಪ್ರಜಾವಾಣಿ ವಾರ್ತೆ
Published 28 ಮೇ 2023, 4:15 IST
Last Updated 28 ಮೇ 2023, 4:15 IST
ಪ್ರಮೋದ್ ಸಾವಂತ್
ಪ್ರಮೋದ್ ಸಾವಂತ್    

ಪಣಜಿ: ಮಹದಾಯಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಸಂಬಂಧ ಮಹದಾಯಿ ಪ್ರವಾಹ್‌(ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಶೀಲ ನದಿ ಪ್ರಾಧಿಕಾರ) ರಚನೆಗೆ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಸೂಚಿಸಿರುವುದನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಸ್ವಾಗತಿಸಿದ್ದಾರೆ.

ಪ್ರಸ್ತುತ ದೆಹಲಿಯಲ್ಲಿ ನಡೆಯುತ್ತಿರುವ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡಿರುವ ಅವರು, ‘ಕೇಂದ್ರ ಸರ್ಕಾರದ ಈ ನಿರ್ಣಯವು ಮಹದಾಯಿ ನದಿ ಉಳಿವಿನ ಹೋರಾಟದಲ್ಲಿ ಗೋವಾ ಪಾಲಿಗೆ ದೊಡ್ಡ ಮೈಲಿಗಲ್ಲು ಆಗಿದೆ’ ಎಂದು ಟ್ವೀಟ್‌ ಮಾಡಿದ್ದಾರೆ.

‘ಇದು ಗೋವಾ ಜನರಿಗೆ ದೊಡ್ಡ ಸುದ್ದಿ. ಮಹದಾಯಿ ನಿರ್ವಹಣೆಗೆ ಪ್ರವಾಹ್‌ ಪ್ರಾಧಿಕಾರ ರಚಿಸಬೇಕು. ಪಣಜಿಯಲ್ಲಿಯೇ ಅದರ ಕೇಂದ್ರ ಕಚೇರಿ ತೆರೆಯಬೇಕು ಎಂಬುದು ನಮ್ಮ ಬಹುದಿನದ ಬೇಡಿಕೆಯಾಗಿತ್ತು. ಅದು ಈಗ ಈಡೇರುತ್ತಿದೆ’ ಎಂದು ತಿಳಿಸಿದ್ದಾರೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.