ಚಂಡೀಗಢ : ಸಿಖ್ ಬೋಧಕ ಅಮೃತ್‌ಪಾಲ್ ಸಿಂಗ್ ಅವರ ಏಳು ಮಂದಿ ಸಹಚರರನ್ನು ಅಮೃತಸರದ ಅಜನಾಲಾದಲ್ಲಿರುವ ನ್ಯಾಯಾಲಯದ ಮುಂದೆ ಶುಕ್ರವಾರ ಹಾಜರುಪಡಿಸಲಾಯಿತು. ಕೋರ್ಟ್ ಇವರನ್ನು ಮಾರ್ಚ್ 25ರವರೆಗೆ ಪೊಲೀಸ್ ವಶಕ್ಕೆ ನೀಡಿದೆ.
ಅಮೃತ್‌ಪಾಲ್ ಸಹಚರರನ್ನು ದಿಬ್ರುಗಢ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಿ ಮತ್ತೊಂದು ಪ್ರಕರಣದಲ್ಲಿ ಪಂಜಾಬ್ ಪೊಲೀಸರು ಬಂಧಿಸಿದರು. 2023ರಲ್ಲಿ ಅಮೃತಸರ ಹೊರವಲಯದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಮತ್ತೆ ಬಂಧಿಸಿದರು. ವರ್ಗಾವಣೆ ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಕಾರಣ ಅವರನ್ನು ಅಜನಾಲಾಗೆ ಕರೆತಂದರು.
‘ವಾರಿಸ್ ಪಂಜಾಬ್ ದೆ’ ಸಂಘಟನೆಯ ಮುಖ್ಯಸ್ಥರಾದ ಅಮೃತ್‌ಪಾಲ್ ಸಿಂಗ್ ಮತ್ತು ಅವರ 9 ಸಹಚರರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯ ಅಡಿ ಎರಡು ವರ್ಷಗಳಿಂದ ಅಸ್ಸಾಂನ ಜೈಲಿನಲ್ಲಿಡಲಾಗಿತ್ತು. ಸಿಂಗ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯ ಗಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.