ADVERTISEMENT

ಕಳ್ಳಭಟ್ಟಿ ಸೇವಿಸಿ ಏಳು ಮಂದಿ ಸಾವು: ಬಿಹಾರದಲ್ಲಿ ಮುಂದುವರಿದ ಸಾವಿನ ಸರಣಿ

ಪಿಟಿಐ
Published 5 ಆಗಸ್ಟ್ 2022, 13:18 IST
Last Updated 5 ಆಗಸ್ಟ್ 2022, 13:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಛಾಪ್ರಾ, ಬಿಹಾರ: ಬಿಹಾರದ ಸರನ್‌ ಜಿಲ್ಲೆಯಲ್ಲಿ ನಡೆದಿರುವ ಕಳ್ಳಭಟ್ಟಿ ದುರಂತದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, 15 ಮಂದಿ ಅಸ್ವಸ್ಥಗೊಂಡಿದ್ದಾರೆ. ಈ ಪೈಕಿ ಕೆಲವರು ದೃಷ್ಟಿ ಕಳೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿ ರಾಜೇಶ್ ಮೀನಾ ಅವರ ಪ್ರಕಾರ, ಮಕೆರ್ ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಈ ಅವಘಡ ನಡೆದಿದೆ. ಕಳ್ಳಭಟ್ಟಿ ಸೇವನೆಯೇ ದುರಂತಕ್ಕೆ ಕಾರಣ ಎಂದು ಮೇಲ್ನೊಟಕ್ಕೆ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.

ಐವರು ಸ್ಥಳದಲ್ಲಿ, ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟರು. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಜನರಿಗೆ ದೃಷ್ಟಿ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ತಪ್ಪಿತಸ್ಥರಿಗಾಗಿ ಮರಹೌರಾ, ಭೇಲ್ದಿ, ಮಕೆರ್ ಠಾಣೆ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ನಡೆದ ಕಳ್ಳಭಟ್ಟಿ ಅವಘಡದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.