
ಪಿಟಿಐ
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಏಳು ಮಂದಿ ಅಧಿಕಾರಿಗಳನ್ನು ಚುನಾವಣಾ ಆಯೋಗವು ಅಮಾನತು ಮಾಡಿದೆ.
ಗಂಭೀರ ಸ್ವರೂಪದ ದುರ್ನಡತೆ, ಕರ್ತವ್ಯ ಲೋಪ ಹಾಗೂ ಶಾಸನಬದ್ಧ ಅಧಿಕಾರಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಅಮಾನತು ಮಾಡಿ ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ಅಮಾನತಾಗಿರುವವರು ರಾಜ್ಯ ಸರ್ಕಾರಿ ನೌಕರರಾಗಿದ್ದು, ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ನೆರವಾಗಲು, ‘ಸಹಾಯಕ ಚುನಾವಣಾ ನೋಂದಣಿ ಅಧಿಕಾರಿ’ಗಳನ್ನಾಗಿ ಆಯೋಗವು ನಿಯೋಜಿಸಿತ್ತು.
ರಾಜ್ಯ ಚುನಾವಣಾ ಆಯೋಗ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರಗಳ ನಡುವೆ ಎಸ್‌ಐಆರ್ ಪ್ರಕ್ರಿಯೆ ಕುರಿತು ಭಿನ್ನಾಭಿಪ್ರಾಯಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.