ADVERTISEMENT

ರಾಜಸ್ಥಾನ: ಟ್ರೈಲರ್‌ಗೆ ವ್ಯಾನ್‌ ಡಿಕ್ಕಿ, ಸ್ಥಳದಲ್ಲೇ ಏಳು ಮಂದಿ ಸಾವು 

ಪಿಟಿಐ
Published 6 ಸೆಪ್ಟೆಂಬರ್ 2020, 3:12 IST
Last Updated 6 ಸೆಪ್ಟೆಂಬರ್ 2020, 3:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೈಪುರ: ರಾಜಸ್ಥಾನದ ಬಿಲ್ವಾರಾ ಜಿಲ್ಲೆಯಲ್ಲಿ ಟ್ರೈಲರ್‌ಗೆ ವ್ಯಾನ್‌ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ಕೋಟಾದಿಂದ ಬಿಲ್ವಾರಾಗೆ ತೆರಳುತ್ತಿದ್ದ ಮಾರ್ಗದಲ್ಲಿ ಕೇಸರ್ಪುರ ಬಳಿ ಅಪಘಾತ ಸಂಭವಿಸಿದೆ.

ಮೃತರನ್ನು ಉಮೇಶ್‌ (40), ಮುಖೇಶ್‌ (23), ಜಮ್ನಾ (45), ಅಮರ್‌ ಚಂದ್‌ (32), ರಾಜು (21), ರಾಧೆಶ್ಯಾಮ್‌ (56) ಮತ್ತು ಶಿವಲಾಲ್‌ (40) ಎಂದು ಗುರುತಿಸಲಾಗಿದೆ.

ADVERTISEMENT

ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದುಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.