ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶದ ಜೊತೆಗೆ ಬೇರೆ ಬೇರೆ ರಾಜ್ಯಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.
ಜಮ್ಮು ಮತ್ತು ಕಾಶ್ಮೀರದ ಎರಡು ವಿಧಾನಸಭೆ ಕ್ಷೇತ್ರಗಳು, ಜಾರ್ಖಂಡ್, ಮಿಜೋರಾಂ, ಒಡಿಶಾ, ಪಂಜಾಬ್, ರಾಜಸ್ಥಾನ ಹಾಗೂ ತೆಲಂಗಾಣದ ತಲಾ ಒಂದು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆಯೂ ಪ್ರಗತಿಯಲ್ಲಿದೆ.
ಜಮ್ಮು ಮತ್ತು ಕಾಶ್ಮೀರದ ಬುದ್ಗಾಂ, ನಗ್ರೊತಾ, ಜಾರ್ಖಂಡ್‌ನ ಗತಿಶೀಲಾ, ಮಿಜೋರಾಂನ ಡಂಪಾ, ಒಡಿಶಾದ ನುವಾಪಾಡಾ, ಪಂಜಾಬ್‌ನ ತರನ್ ತಾರನ್, ರಾಜಸ್ಥಾನ ಅಂತಾ, ತೆಲಂಗಾಣದ ಜ್ಯುಬಿಲಿ ಹಿಲ್ಸ್ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.