ADVERTISEMENT

ನಿತೀಶ್ ಕುಮಾರ್ ಅವರ ಜನತಾ ದರ್ಬಾರ್‌ನಲ್ಲಿ ಭಾಗಿಯಾಗಿದ್ದ ಏಳು ಜನರಿಗೆ ಕೋವಿಡ್

ಪಿಟಿಐ
Published 3 ಜನವರಿ 2022, 12:39 IST
Last Updated 3 ಜನವರಿ 2022, 12:39 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಪಟ್ನಾ: ಜನತಾ ದರ್ಬಾರ್ ಕಾರ್ಯಕ್ರಮದಲ್ಲಿ ಸೋಮವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಲು ಬಂದಿದ್ದ ಏಳು ಜನರಿಗೆ ಕೋವಿಡ್-19 ದೃಢಪಟ್ಟಿದೆ.

ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ಅಡುಗೆ ವ್ಯವಸ್ಥೆಯನ್ನು ನೋಡಿಕೊಳ್ಳುತ್ತಿದ್ದ ಸಿಬ್ಬಂದಿಗೂ ಕೊರೊನಾ ವೈರಸ್ ಸೋಂಕು ತಗುಲಿದೆ. ಹರಡುತ್ತಿರುವ ಸೋಂಕನ್ನು ತಡೆಯಲು ರಾಜ್ಯದಲ್ಲಿ ಕಠಿಣ ನಿರ್ಬಂಧಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ. ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ಬಗ್ಗೆ ಕಾಳಜಿ ವಹಿಸುವುದು ಅಗತ್ಯವಾಗಿದೆ' ಎಂದು ಹೇಳಿದರು.

‘ಜನತಾ ಕೆ ದರ್ಬಾರ್ ಮೇ ಮುಖ್ಯಮಂತ್ರಿ’ ಕಾರ್ಯಕ್ರಮಕ್ಕೆ ಪ್ರತಿ ಸೋಮವಾರ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಭೇಟಿ ನೀಡುವ ಎಲ್ಲರೂ ಕಡ್ಡಾಯ ಪರೀಕ್ಷೆಗೆ ಒಳಗಾಗುತ್ತಾರೆ. ಈ ಪರೀಕ್ಷೆಯಲ್ಲಿ ಕೆಲವರ ವರದಿ ಪಾಸಿಟಿವ್ ಬಂದಿದ್ದು ಆತಂಕಕ್ಕೆ ಕಾರಣವಾಯಿತು.

ADVERTISEMENT

'ಸದ್ಯ ಜಾರಿಯಲ್ಲಿರುವ ನಿರ್ಬಂಧಗಳು ಜ.5ರವರೆಗೂ ಇರಲಿವೆ. ಆದರೆ, ಏರಿಕೆಯಾಗುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ನಾಳೆ ಅಧಿಕಾರಿಗಳು ಸಭೆ ಸೇರಿದಾಗ ಖಂಡಿತವಾಗಿಯೂ ಏರುತ್ತಿರುವ ಕೋವಿಡ್ ಪ್ರಕರಣಗಳಿಗೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ' ಎಂದು ಮುಖ್ಯಮಂತ್ರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.