ಮುಂಬೈ: ಮಹಾರಾಷ್ಟ್ರದ ಠಾಣೆಯಲ್ಲಿ ಶುಕ್ರವಾರ ರಾತ್ರಿ ವಸತಿ ಕಟ್ಟಡ ಕುಸಿತದ ಪರಿಣಾಮ ಉಂಟಾಗಿರುವ ದುರಂತದಲ್ಲಿ ಏಳು ಮಂದಿ ಸಾವಿಗೀಡಾಗಿದ್ದಾರೆ.
ಠಾಣೆಯ ಉಲ್ಹಾಸ್‌ನಗರದಲ್ಲಿ ಕಟ್ಟಡದ ಸ್ಲ್ಯಾಬ್ ಕುಸಿತದ ಪರಿಣಾಮ ದುರಂತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:'ಯಸ್' ಹಾನಿಯ ವೈಮಾನಿಕ ಸಮೀಕ್ಷೆ; ₹1,000 ಕೋಟಿ ತುರ್ತು ನೆರವು ಘೋಷಿಸಿದ ಪ್ರಧಾನಿ
ಕಟ್ಟಡದ ಅವಶೇಷಗಳಿಂದ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮತ್ತಷ್ಟು ಮಂದಿ ಸಿಲುಕಿರುವುದಾಗಿ ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಠಾಣೆ ಮಹಾನಗರ ಪಾಲಿಕೆ (ಟಿಎಂಸಿ) ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.