ಅಪಘಾತ
–ಪ್ರಾತಿನಿಧಿಕ ಚಿತ್ರ
ಮಂಡಸೌರ್: ಮಧ್ಯಪ್ರದೇಶದ ಮಂಡಸೌರ್ ಜಿಲ್ಲೆಯಲ್ಲಿ ಭಾನುವಾರ ಮಧ್ಯಾಹ್ನ ವ್ಯಾನ್ ಬಾವಿಗೆ ಬಿದ್ದು ಸಂಭವಿಸಿದ ದುರಂತದಲ್ಲಿ 11 ಮಂದಿ ಸಾವಿಗೀಡಾಗಿದ್ದಾರೆ.
ಬೈಕ್‌ಗೆ ಡಿಕ್ಕಿ ಹೊಡೆದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಬಾವಿಗೆ ಬಿದ್ದಿತ್ತು. ಬೈಕ್ ಸವಾರ ಮತ್ತು ರಕ್ಷಣಾ ಕಾರ್ಯಾಚರಣೆಗೆ ಇಳಿದಿದ್ದ ಸ್ಥಳೀಯರೊಬ್ಬರು ಸಾವಿಗೀಡಾದವರಲ್ಲಿ ಸೇರಿದ್ದಾರೆ ಎಂದು ರಟ್ಲಾಂ ವಲಯ ಡಿಐಜಿ ಮನೋಜ್ ಸಿಂಗ್ ತಿಳಿಸಿದ್ದಾರೆ.
ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಚಾರಿಯಾ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ) ಸೇರಿದಂತೆ ವಿವಿಧ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸಿದವು.
ವ್ಯಾನ್‌ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ 13 ಮಂದಿ ಪ್ರಯಾಣಿಸುತ್ತಿದ್ದರು. ಇದರಲ್ಲಿ 9 ಮಂದಿ ಜಲ ಸಮಾಧಿಯಾಗಿದ್ದು, ನಾಲ್ವರನ್ನು ರಕ್ಷಣೆ ಮಾಡಲಾಗಿದೆ.
ದುರಂತದ ವಿಷಯ ತಿಳಿಯುತ್ತಿದ್ದಂತೆ ಮಧ್ಯಪ್ರದೇಶ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.