ADVERTISEMENT

ಹೈದರಾಬಾದ್‌ನ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ: ಹಲವರಿಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 11:24 IST
Last Updated 12 ಡಿಸೆಂಬರ್ 2020, 11:24 IST
ಕಾರ್ಖಾನೆಯಲ್ಲಿ ಸ್ಫೋಟಗೊಂಡಿರುವ ದೃಶ್ಯ
ಕಾರ್ಖಾನೆಯಲ್ಲಿ ಸ್ಫೋಟಗೊಂಡಿರುವ ದೃಶ್ಯ   

ಹೈದರಾಬಾದ್‌: ನಗರದ ಹೊರವಲಯದಲ್ಲಿರುವ ಬೊಲ್ಲಾರಮ್ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಶನಿವಾರ ಭಾರಿ ಸ್ಫೋಟ ಸಂಭವಿಸಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಬೆಂಕಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಸುಮಾರು 10 ಕಾರ್ಮಿಕರು ಗಾಯಗೊಂಡಿದ್ದು ಅವರನ್ನು ಹತ್ತಿರದಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಕೈಗಾರಿಕಾ ಪ್ರದೇಶದಲ್ಲಿರುವ ಇನ್ನುಳಿದಘಟಕಗಳಲ್ಲಿನ ರಿಯಾಕ್ಟರ್‌ಗಳನ್ನು ಮುಚ್ಚಲಾಗಿದ್ದು,ಮುನ್ನೆಚ್ಚರಿಕೆ ಕ್ರಮವಾಗಿಕಾರ್ಮಿಕರನ್ನು ಸ್ಥಳಾಂತರಿಸಲಾಗಿದೆ.

ADVERTISEMENT

ಈ ವರೆಗೆ ಯಾವುದೇ ಸಾವು ಸಂಭವಿಸಿದ ಬಗೆಗಿನ ಮಾಹಿತಿ ಲಭ್ಯವಾಗಿಲ್ಲ.

ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.