ಹಲ್ಲೆ
(ಪ್ರಾತಿನಿಧಿಕ ಚಿತ್ರ)
ಗಿರಿಡೀಹ್: ಜಾರ್ಖಂಡ್‌ನ ಗಿರಿಡೀಹ್ ಜಿಲ್ಲೆಯಲ್ಲಿ ಶುಕ್ರವಾರ ಹೋಳಿ ಹಬ್ಬದ ಆಚರಣೆಯ ವೇಳೆ ನಡೆದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗುಂಪು ಘರ್ಷಣೆಯಿಂದಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
'ಕನಿಷ್ಠ ಮೂರು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘೋಡ್‌ಥಂಬಾದಲ್ಲಿ ಹೋಳಿ ಹಬ್ಬದ ಸಂಭ್ರಮದ ಮೆರವಣಿಗೆ ಹಾದು ಹೋಗುವಾಗ ಇನ್ನೊಂದು ಗುಂಪು ವಿರೋಧಿಸಿರುವುದು ಘರ್ಷಣೆಗೆ ಕಾರಣವಾಯಿತು. ಬಳಿಕ ಎರಡೂ ಕಡೆಯವರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
'ಪ್ರದೇಶದಲ್ಲಿ ಶಾಂತಿ ಪುನಃಸ್ಥಾಪಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಘರ್ಷಣೆ ಸಂಬಂಧ ತನಿಖೆ ನಡೆಯುತ್ತಿದೆ. ಪರಿಸ್ಥಿತಿ ಮೇಲೆ ನಿಗಾ ವಹಿಸಲಾಗಿದೆ' ಎಂದು ಪೊಲೀಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.