ADVERTISEMENT

ಛತ್ತೀಸಗಢದಲ್ಲಿ ಗುಂಡಿನ ಚಕಮಕಿ: 12ಕ್ಕೂ ಹೆಚ್ಚು ನಕ್ಸಲರ ಹತ್ಯೆ

ಪಿಟಿಐ
Published 21 ಜನವರಿ 2025, 6:18 IST
Last Updated 21 ಜನವರಿ 2025, 6:18 IST
<div class="paragraphs"><p>ಭದ್ರತಾ ಸಿಬ್ಬಂದಿ (ಪ್ರಾತಿನಿಧಿಕ ಚಿತ್ರ)</p></div>

ಭದ್ರತಾ ಸಿಬ್ಬಂದಿ (ಪ್ರಾತಿನಿಧಿಕ ಚಿತ್ರ)

   

ಪಿಟಿಐ ಚಿತ್ರ

ಗರಿಯಾಬಂದ್‌: ಛತ್ತೀಸಗಢದ ಗರಿಯಾಬಂದ್‌ ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡೆದ ಗುಂಡಿನ ಚಕಮಕಿಯಲ್ಲಿ 12 ನಕ್ಸಲರ ಹತ್ಯೆಯಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ADVERTISEMENT

ಸೋಮವಾರ ಇದೇ ಕಾರ್ಯಾಚರಣೆಯ ಸಂದರ್ಭದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಮೃತಪಟ್ಟಿದ್ದರು. ಈ ವೇಳೆ ಒಬ್ಬ ಕೋಬ್ರಾ ಸಿಬ್ಬಂದಿ ಗಾಯಗೊಂಡಿದ್ದರು.

ಛತ್ತೀಸಗಢ-ಒಡಿಶಾ ಗಡಿಯಲ್ಲಿರುವ ಮೈನ್‌ಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮುಂಜಾನೆ ಮತ್ತೆ ಗುಂಡಿನ ಚಕಮಕಿ ನಡೆದಿದ್ದು, 12 ನಕ್ಸಲರು ಮೃತಪಟ್ಟಿದ್ದಾರೆ. ನಕ್ಸಲರ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಜಿಲ್ಲಾ ಮೀಸಲು ಪೊಲೀಸ್‌ ಪಡೆ (ಡಿಆರ್ಜಿ), ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್ಪಿಎಫ್‌) ಛತ್ತೀಸಗಢ ಕೋಬ್ರಾ ಪಡೆಯವರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. 

ಮಹಿಳಾ ನಕ್ಸಲರ ಮೃತದೇಹ ಪತ್ತೆಯಾದ ಸ್ಥಳದಿಂದ ರೈಫಲ್ಸ್‌ ಸೇರಿದಂತೆ ಬಂದೂಕುಗಳು, ಮದ್ದುಗುಂಡುಗಳು ಮತ್ತು ಅಪಾರ ಪ್ರಮಾಣದ ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.