ಭದ್ರತಾ ಪಡೆ
(ಪ್ರಾತಿನಿಧಿಕ ಚಿತ್ರ)
ಬಿಜಾಪುರ್: ಛತ್ತೀಸಗಢದ ಬಿಜಾಪುರ್ ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಇಂದು (ಭಾನುವಾರ) ನಡೆದ ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದು, ಮತ್ತಿಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಅರಣ್ಯ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಭದ್ರತಾ ಸಿಬ್ಬಂದಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಹತರಾಗಿದ್ದಾರೆ. ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.