ADVERTISEMENT

ಮುಂಬೈಯ ಹಲವೆಡೆ ವಿದ್ಯುತ್ ವ್ಯತ್ಯಯ: ಸ್ಥಳೀಯ ರೈಲು ಸಂಚಾರಕ್ಕೆ ಅಡಚಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಫೆಬ್ರುವರಿ 2022, 6:13 IST
Last Updated 27 ಫೆಬ್ರುವರಿ 2022, 6:13 IST
ಸಾಂದರ್ಭಿಕ ಚಿತ್ರ (ಕೃಪೆ – ಐಎಎನ್‌ಎಸ್ ಸಂಗ್ರಹ)
ಸಾಂದರ್ಭಿಕ ಚಿತ್ರ (ಕೃಪೆ – ಐಎಎನ್‌ಎಸ್ ಸಂಗ್ರಹ)   

ಮುಂಬೈ: ವಾಣಿಜ್ಯ ನಗರಿಯ ಹಲವೆಡೆ ಭಾನುವಾರ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಸ್ಥಳೀಯ ರೈಲು ಸಂಚಾರಕ್ಕೂ ಅಡಚಣೆಯಾಗಿದೆ.

ಪುನಃಸ್ಥಾಪನೆ ಕೆಲಸ ಪ್ರಗತಿಯಲ್ಲಿದೆ ಎಂದು ಬ್ರುಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮತ್ತು ಬೃಹನ್‌ಮುಂಬೈ ವಿದ್ಯುತ್ ಪೂರೈಕೆ ಮತ್ತು ಸಾರಿಗೆ (ಬಿಇಎಸ್‌ಟಿ) ತಿಳಿಸಿವೆ.

‘ಕೆಲವು ತಾಂತ್ರಿಕ ಕಾರಣಗಳಿಂದಾಗಿ ನಗರದ ಅನೇಕ ಕಡೆಗಳಲ್ಲಿ ವಿದ್ಯುತ್ ಪೂರೈಕೆಗೆ ಅಡಚಣೆಯಾಗಿದೆ. ಸಮಸ್ಯೆ ಸರಿಪಡಿಸಲು ನಮ್ಮ ತಂಡ ಶ್ರಮಿಸುತ್ತಿದೆ. ಶೀಘ್ರದಲ್ಲೇ ವಿದ್ಯುತ್ ಪೂರೈಕೆ ಆರಂಭವಾಗಲಿದೆ’ ಎಂದು ಬಿಇಎಸ್‌ಟಿ ತಿಳಿಸಿದೆ.

ADVERTISEMENT

ಪಶ್ಚಿಮ ರೈಲ್ವೆ ವ್ಯಾಪ್ತಿಯ ಉಪನಗರ ರೈಲು ಸೇವೆಗೆ ತೊಂದರೆಯಾಗಿದೆ. ಕೇಂದ್ರ ರೈಲ್ವೆ ಸೇವೆಗಳು ಸಹಜವಾಗಿ ಸಾಗಿವೆ ಎಂದು ಮೂಲಗಳು ತಿಳಿಸಿವೆ.

‘ವಿದ್ಯುತ್ ವ್ಯತ್ಯಯದಿಂದಾಗಿ ಮುಂಬೈಯ ಹಲವು ಕಡೆಗಳಲ್ಲಿ ಸ್ಥಳೀಯ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ಚರ್ಚ್‌ಗೇಟ್–ಅಂಧೇರಿ ಸೆಕ್ಷನ್‌ನಲ್ಲಿ ಸಂಚಾರಕ್ಕೆ ಅಡಚಣೆಯಾಗಿದೆ’ ಎಂದು ಪಶ್ಚಿಮ ರೈಲ್ವೆ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.