ADVERTISEMENT

ಮಧ್ಯಪ್ರದೇಶ: ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಅಕ್ಟೋಬರ್ 2023, 5:39 IST
Last Updated 4 ಅಕ್ಟೋಬರ್ 2023, 5:39 IST
   

ಭೂಪಾಲ್‌: ವಿಷಾಹಾರ ಸೇವನೆಯಿಂದ 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ ಘಟನೆ ಗ್ವಾಲಿಯರ್‌ನಲ್ಲಿ ನಡೆದಿದೆ. 

ಗ್ವಾಲಿಯರ್‌ನ ಲಕ್ಷ್ಮೀಬಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫಿಸಿಕಲ್ ಎಜುಕೇಶನ್‌ ಕೇಂದ್ರದಲ್ಲಿ ಪನ್ನೀರ್‌ ಸೇವಿಸಿದ ಬಳಿಕ ಮಕ್ಕಳು ಅನಾರೋಗ್ಯಕ್ಕೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅನೇಕರಲ್ಲಿ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಕೆಲವರ ಸ್ಥಿತಿ ಕೊಂಚ ಗಂಭೀರವಾಗಿದೆ, ಆದರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ವೈದ್ಯಕೀಯ ತಪಾಸಣೆಯಲ್ಲಿ ವಿಷಾಹಾರ ಸೇವನೆಯಿಂದ ಅನಾರೋಗ್ಯ ಉಂಟಾಗಿರುವುದು ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ಸುಮಾರು 100 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಸದ್ಯ ಅವರೆಲ್ಲರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಲಕ್ಷ್ಮಿಬಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫಿಸಿಕಲ್ ಎಜುಕೇಶನ್‌ನ ರಿಜಿಸ್ಟ್ರಾರ್ ಅಮಿತ್ ಯಾದವ್ ಪಿಟಿಐಗೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.