ADVERTISEMENT

ರೈಲಿನಲ್ಲಿ ಆಮೆಗಳ ಕಳ್ಳಸಾಗಣೆ: ಇಬ್ಬರ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಆಗಸ್ಟ್ 2023, 13:00 IST
Last Updated 29 ಆಗಸ್ಟ್ 2023, 13:00 IST
ಪ್ರಾತಿನೀಧಿಕ ಚಿತ್ರ
ಪ್ರಾತಿನೀಧಿಕ ಚಿತ್ರ   

ಮಿರ್ಜಾಪುರ: ಹೌರಾಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಆಮೆಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, 230 ಆಮೆಗಳನ್ನು ರಕ್ಷಿಸಲಾಗಿದೆ ಎಂದು ರೈಲ್ವೆ ಪೊಲೀಸ್‌ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. 

ಜೋಧಪುರ –ಹೌರಾ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಕ್ರಮವಾಗಿ ಆಮೆಗಳನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಆಧಾರದ ಮೇಲೆ ಸರ್ಕಾರಿ ರೈಲ್ವೆ ಪೊಲೀಸ್‌ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ.

ತಪಾಸಣೆ ವೇಳೆ ರಾಕೇಶ್‌ (28) ಎಂಬ ಯುವಕ ಹಾಗೂ ಲಾಖೊ(40) ಎನ್ನುವ ಮಹಿಳೆ ಸೆರೆಸಿಕ್ಕಿದ್ದು ಅವರನ್ನು ಬಂಧಿಸಿದ್ದಾರೆ.

ADVERTISEMENT

ಇಬ್ಬರೂ ಕೂಡ ಟಿಕೆಟ್‌ ಇಲ್ಲದೆ ಪ್ರಯಾಣ ಮಾಡುತ್ತಿದ್ದರು.12 ಬ್ಯಾಗ್‌ಗಳಲ್ಲಿ ಒಟ್ಟು 230 ಆಮೆಗಳಿದ್ದವು. ವಿಚಾರಣೆ ವೇಳೆ ಪಶ್ಚಿಮ ಬಂಗಾಳಕ್ಕೆ ಆಮೆಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ. ಹೆಚ್ಚಿನ ವಿಚಾರಣೆಗೆ ಇಬ್ಬರನ್ನೂ ಅರಣ್ಯ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.