ADVERTISEMENT

ಜಮ್ಮು & ಕಾಶ್ಮೀರ | ಭಯೋತ್ಪಾದಕ ದಾಳಿ: ಹಲವು ಮಂದಿ ಸಾವು; 20 ಜನರಿಗೆ ಗಾಯ

ಪಿಟಿಐ
Published 22 ಏಪ್ರಿಲ್ 2025, 11:23 IST
Last Updated 22 ಏಪ್ರಿಲ್ 2025, 11:23 IST
ಭಯೋತ್ಪಾದಕ
ಭಯೋತ್ಪಾದಕ   

(ಸಾಂದರ್ಭಿಕ ಚಿತ್ರ)

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಇಂದು (ಮಂಗಳವಾರ) ನಡೆದ ಭಯೋತ್ಪಾದಕ ದಾಳಿಯಲ್ಲಿ ಹಲವು ಮಂದಿ ಮೃತಪಟ್ಟಿದ್ದು, ಕನಿಷ್ಠ 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಹಲ್ಗಾಮ್‌ ಪಟ್ಟಣದ ಬೈಸರನ್‌ ಹುಲ್ಲುಗಾವಲಿನ ಪ್ರದೇಶದಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ADVERTISEMENT

ಗಾಯಾಳುಗಳನ್ನು ಹೆಲಿಕಾಪ್ಟರ್‌ ಮೂಲಕ ಸ್ಥಳಾಂತರಿಸಲಾಗಿದೆ. 12 ಮಂದಿ ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣವೇ ಭದ್ರತಾ ಪಡೆ, ಸಿಆರ್‌ಪಿಎಫ್‌ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದರು. ದಾಳಿಕೋರರ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಸ್ಥಳದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ, ‘ಘಟನೆಯಲ್ಲಿ ಮೃತಪಟ್ಟವರ ಸಾವಿನ ಸಂಖ್ಯೆ ಇನ್ನೂ ಖಚಿತಗೊಂಡಿಲ್ಲ. ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿ ಹೇಯ ಕೃತ್ಯವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.