ADVERTISEMENT

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಅತ್ಯಾಚಾರಕ್ಕೆ ಸಮ: ಅಲಹಾಬಾದ್ ಹೈಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಆಗಸ್ಟ್ 2021, 11:42 IST
Last Updated 5 ಆಗಸ್ಟ್ 2021, 11:42 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ಲಖನೌ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮ. ಅಂತಹ ಪ್ರಕರಣಗಳನ್ನು ನಿರ್ವಹಿಸಲು ಕಾನೂನು ರೂಪಿಸುವ ಅಗತ್ಯವಿದೆ ಎಂದು ಅಲಹಾಬಾದ್‌ ಹೈಕೋರ್ಟ್‌ ಹೇಳಿದೆ.

ಮದುವೆಯಾಗುವುದಾಗಿ ಭರವಸೆ ನೀಡಿ ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ ವ್ಯಕ್ತಿಯೊಬ್ಬ ಬಳಿಕ ಮದುವೆಯಾಗಲು ನಿರಾಕರಿಸಿದ್ದ. ಈ ಸಂಬಂಧ ಸಂತ್ರಸ್ತ ಮಹಿಳೆಯುಉತ್ತರ ಪ್ರದೇಶದ ಕಾನ್ಪುರದಲ್ಲಿ ದೂರು ದಾಖಲಿಸಿದ್ದರು.ಸದ್ಯ ಬಂಧನಕ್ಕೊಳಗಾಗಿರುವ ವ್ಯಕ್ತಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರದೀಪ್‌ ಕುಮಾರ್‌ ಶ್ರೀವಾಸ್ತವ ನೇತೃತ್ವದ ಪೀಠ ಜಾಮೀನು ನೀಡಲು ನಿರಾಕರಿಸಿದೆ.

ʼಅತ್ಯಾಚಾರವುಸಮಾಜದಲ್ಲಿ ಅತ್ಯಂತ ಖಂಡನೀಯ ಅಪರಾಧವಾಗಿದೆ. ಇದು ಸಂತ್ರಸ್ತೆಯ ಮನಸ್ಸಿನ ಮೇಲೆ ದೀರ್ಘಕಾಲದವರೆಗೆ ಪರಿಣಾಮ ಬೀರುತ್ತದೆ. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮ ಎಂದು ಪರಿಗಣಿಸಲಾಗುತ್ತದೆʼ ಎಂದು ಪೀಠ ಹೇಳಿದೆ.

ADVERTISEMENT

ʼಆರೋಪಿಯುಸಂತ್ರಸ್ತೆಗೆ ಮೋಸ ಮಾಡುವಉದ್ದೇಶದಿಂದಲೇ ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿದ್ದಾನೆ. ಆರೋಪಿಗಳು ಕಾನೂನಿನಲಾಭ ಪಡೆದು ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸುವುದರಿಂದಇಂತಹ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿವೆʼ ಎಂದೂ ಹೇಳಿದೆ.

ಮುಂದುವರಿದು, ಇಂತಹ ಪ್ರಕರಣಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಸ್ಪಷ್ಟ ಮತ್ತು ನಿರ್ದಿಷ್ಟವಾದ ಕಾನೂನು ರೂಪಿಸುವ ಅಗತ್ಯವಿದೆ. ಕಾನೂನು ಜಾರಿಯಾಗುವವರೆಗೂ, ದೀರ್ಘಕಾಲ ಸಂಬಂಧಹೊಂದಿರದ ಹೊರತು ಮದುವೆಯ ಭರವಸೆಯನ್ನು ನಂಬಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವ ಸಂತ್ರಸ್ತಮಹಿಳೆಯರಿಗೆ ರಕ್ಷಣೆ ನೀಡುವುದನ್ನು ಮುಂದುವರಿಸಬೇಕು ಎಂದು ಕೋರ್ಟ್‌ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.