ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣ: ತೇಜ್‌ಪಾಲ್ ವಿರುದ್ಧ ವಿಚಾರಣೆ ಜು.29ಕ್ಕೆ ಮುಂದೂಡಿಕೆ

ಪಿಟಿಐ
Published 24 ಜೂನ್ 2021, 10:21 IST
Last Updated 24 ಜೂನ್ 2021, 10:21 IST
ಕೋರ್ಟ್‌ ವಿಚಾರಣೆ– ಪ್ರಾತಿನಿಧಿಕ ಚಿತ್ರ
ಕೋರ್ಟ್‌ ವಿಚಾರಣೆ– ಪ್ರಾತಿನಿಧಿಕ ಚಿತ್ರ   

ಪಣಜಿ: ಗೋವಾದ ಖಾಸಗಿ ಹೋಟೆಲ್‌ವೊಂದರಲ್ಲಿ 2013ರಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಪತ್ರಕರ್ತ ತರುಣ್ ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸುವುದರ ವಿರುದ್ಧ ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಜುಲೈ 29ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿಗಳಾದ ಎಂ.ಎಸ್.ಸೋನಾಕ್ ಮತ್ತು ಎಂ.ಎಸ್‌.ಜವಾಲ್ಕರ್ ಅವರ ವಿಭಾಗೀಯ ಪೀಠವು, ಸರ್ಕಾರಕ್ಕೆ ತಮ್ಮ ಮನವಿಯನ್ನು ಪರಿಷ್ಕರಿಸಲು ಅವಕಾಶ ನೀಡಿದ್ದು, ಪರಿಷ್ಕೃತ ಮನವಿಯ ಪ್ರತಿಯೊಂದನ್ನು ತೇಜ್‌ಪಾಲ್‌ಗೆ ನೀಡಲು ಸೂಚಿಸಿದೆ.

ತೇಜ್‌ಪಾಲ್ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ‘ಈ ಪ್ರಕರಣದಲ್ಲಿ ವಾದ ಮಂಡಿಸುವುದಕ್ಕಾಗಿ ಸಿದ್ಧತೆ ನಡೆಸಲು ಸ್ವಲ್ಪ ಸಮಯ ಬೇಕಿದೆ' ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಯಾಗಿ ನ್ಯಾಯಪೀಠ, ಈ ವಿಚಾರಣೆಯನ್ನು ಜುಲೈ 29 ಕ್ಕೆ ಮುಂದೂಡಲಾಗಿದ್ದು, ಅಂದು ನಿಮ್ಮ ಮೇಲ್ಮನವಿಯನ್ನು ಆಲಿಸುವುದಾಗಿ ಹೇಳಿತು.

ADVERTISEMENT

ಗೋವಾದ ಪಂಚತಾರಾ ಹೋಟೆಲ್‌ನ ಲಿಫ್ಟ್‌ನಲ್ಲಿ 2013 ರ ನವೆಂಬರ್‌ನಲ್ಲಿ ಆಗಿನ ತನ್ನ ಸಹೋದ್ಯೋಗಿಗಿಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ತೇಜ್‌ಪಾಲ್‌ ಅವರನ್ನು ಮೇ 21 ರಂದು ಸೆಷನ್ಸ್ ನ್ಯಾಯಾಧೀಶೆ ಕ್ಷಮಾ ಜೋಶಿ ಖುಲಾಸೆಗೊಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.