ADVERTISEMENT

ಲೈಂಗಿಕ ದೌರ್ಜನ್ಯ: 2ನೇ ಪ್ರಕರಣದಲ್ಲಿ ರಾಹುಲ್‌ಗೆ ನಿರೀಕ್ಷಣಾ ಜಾಮೀನು

ಪಿಟಿಐ
Published 10 ಡಿಸೆಂಬರ್ 2025, 9:47 IST
Last Updated 10 ಡಿಸೆಂಬರ್ 2025, 9:47 IST
<div class="paragraphs"><p>ಜಾಮೀನು</p></div>

ಜಾಮೀನು

   

– ಎಐ ಚಿತ್ರ

ತಿರುವನಂತಪುರ: ಕೇರಳದ ಪಾಲಕ್ಕಾಡ್‌ ಉಚ್ಚಾಟಿತ ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಧಾಖಲಾಗಿದ್ದ ಎರಡನೇ ಪ್ರಕರಣದಲ್ಲಿ ಬುಧವಾರ ನಿರೀಕ್ಷಣಾ ಜಾಮೀನು ಸಿಕ್ಕಿದೆ.

ವಿಚಾರಣೆ ನಡೆಸಿದ ಇಲ್ಲಿನ ಸೆಷನ್ಸ್ ನ್ಯಾಯಾಲಯವು ರಾಹುಲ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ ಎಂದು ರಾಹುಲ್‌ ಪರ ವಕೀಲರು ಮಾಹಿತಿ ನೀಡಿದ್ದಾರೆ.

ಮೊದಲ ಅತ್ಯಾಚಾರ ಪ್ರಕರಣ ಸಂಬಂಧ ಬಂಧನದಿಂದ ರಕ್ಷಣೆ ಕೋರಿ ಕೇರಳ ಹೈಕೋರ್ಟ್‌ ಮೆಟ್ಟಿಲೇರಿದ್ದ ರಾಹುಲ್‌ ಸದ್ಯಕ್ಕೆ ಬಂಧನದಿಂದ ಬಚಾವ್‌ ಆಗಿದ್ದಾರೆ.

ಬೆಂಗಳೂರಿನ ನಿವಾಸಿಯಾಗಿರುವ 23 ವರ್ಷದ ಮಹಿಳೆ, ರಾಹುಲ್ ಮಾಂಕೂಟತ್ತಿಲ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ, ಕಾಂಗ್ರೆಸ್‌ನ ರಾಷ್ಟ್ರೀಯ ಹಾಗೂ ರಾಜ್ಯ ಘಟಕದ ಮುಖ್ಯಸ್ಥರಿಗೆ ಇ–ಮೇಲ್‌ ಮೂಲಕ ದೂರು ಸಲ್ಲಿಸಿದ್ದರು.

ಈಗಾಗಲೇ ಗರ್ಭಿಣಿಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಆರೋಪವನ್ನು ರಾಹುಲ್‌ ಎದುರಿಸುತ್ತಿದ್ದಾರೆ. ಇದೇ ವಿಚಾರವಾಗಿ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪದಲ್ಲಿರುವಾಗಲೇ ಈ ಬೆಳವಣಿಗೆ ನಡೆದಿರುವುದು ಕೇರಳದ ಕಾಂಗ್ರೆಸ್‌ ಘಟಕವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.