ADVERTISEMENT

ಪಾಶ್‌ ಸಮಿತಿ ರಚಿಸುವಂತೆ ಪಕ್ಷಗಳಿಗೆ ನಿರ್ದೇಶನ ನೀಡಿ: ಸುಪ್ರೀಂ ಕೋರ್ಟ್‌ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 13:54 IST
Last Updated 24 ಜುಲೈ 2025, 13:54 IST
<div class="paragraphs"><p> ಸುಪ್ರೀಂ ಕೋರ್ಟ್‌</p></div>

ಸುಪ್ರೀಂ ಕೋರ್ಟ್‌

   

ನವದೆಹಲಿ: ‘ಉದ್ಯೋಗದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆ, ನಿರ್ಬಂಧ ಮತ್ತು ಪರಿಹಾರ) ಕಾಯ್ದೆ (ಪಾಶ್‌ ಕಾಯ್ದೆ– 2013) ಅನ್ವಯ ‘ದೂರು ಮೇಲ್ವಿಚಾರಣಾ ಸಮಿತಿ’ ರಚಿಸುವಂತೆ ರಾಜಕೀಯ ಪಕ್ಷಗಳಿಗೆ ನಿರ್ದೇಶನ ನೀಡಿ’ ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿದೆ.

‘ಚುನಾವಣಾ ಪ್ರಚಾರ, ತಳಮಟ್ಟದಲ್ಲಿನ ಪಕ್ಷದ ಕಾರ್ಯಚಟುವಟಿಕೆಗಳ ಸಂದರ್ಭದಲ್ಲಿ ಪಕ್ಷಗಳ ಮಹಿಳಾ ಕಾರ್ಯಕರ್ತರು ಲೈಂಗಿಕ ದೌರ್ಜನ್ಯ ಅನುಭವಿಸುತ್ತಿದ್ದಾರೆ. ಪಕ್ಷಗಳ ಕಾರ್ಯಕರ್ತೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಯಾವುದೇ ಪ್ರತ್ಯೇಕ ಕಾನೂನು ಇಲ್ಲ’ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ADVERTISEMENT

‘ರಾಜಕೀಯ ಪಕ್ಷಗಳು ಕೂಡ ಈ ಕಾಯ್ದೆಯ ಅಡಿಯಲ್ಲಿ ಬರುತ್ತವೆ. ಆದ್ದರಿಂದ, ಅವುಗಳು ಕೂಡ ದೂರು ಮೇಲ್ವಿಚಾರಣಾ ಸಮಿತಿ ರಚಿಸಬೇಕಾಗುತ್ತದೆ’ ಎಂದು ಹೇಳಲಾಗಿದೆ.

ಯೋಗಮಯ ಎಂ.ಜಿ ಎಂಬುವರು 2024ರಲ್ಲಿ ಇಂಥದ್ದೇ ಅರ್ಜಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದರು. ‘ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವ ಸಂಸ್ಥೆ ಬಳಿ ನಿಮ್ಮ ಮನವಿ ನೀಡಿ’ ಎಂದು ಆಗ ನ್ಯಾಯಾಲಯ ಹೇಳಿತ್ತು.

ಈ ಬಳಿಕ ಅರ್ಜಿದಾರರು, ಚುನಾವಣಾ ಆಯೋಗದ ಮೊರೆ ಹೋಗಿದ್ದರು. ‘ಮನವಿ ಸಲ್ಲಿಸಿದರೂ ಇಲ್ಲಿಯವರೆಗೆ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.