ಹಿರಂದಾಸ್ ಮುರಳಿ (ವೇದನ್)
ತಿರುವನಂತಪುರ: ಯುವ ವೈದ್ಯೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ‘ವೇದನ್’ ಎಂದೇ ಹೆಸರಾದ ಮಲಯಾಳಂ ರ‍್ಯಾಪರ್ ಹಿರಂದಾಸ್ ಮುರಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ತಡರಾತ್ರಿ ತ್ರಿಕ್ಕಾಕರ ಪೊಲೀಸ್ ಠಾಣೆಯಲ್ಲಿ ರ‍್ಯಾಪರ್ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘2021ರ ಆಗಸ್ಟ್‌ನಿಂದ 2023ರ ಮಾರ್ಚ್‌ವರೆಗೆ ಮದುವೆ ಆಗುವುದಾಗಿ ಸುಳ್ಳು ಭರವಸೆ ನೀಡಿ ಹಿರಂದಾಸ್ ಮುರಳಿ ನನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದರು’ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಂತ್ರಸ್ತೆ ಹಲವಾರು ಬಾರಿ ದೂರು ನೀಡಿದ ಬಳಿಕವಷ್ಟೇ ಹಿರಂದಾಸ್ ಮುರಳಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದೇ ವರ್ಷ ಏಪ್ರಿಲ್‌ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಮುರಳಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಚಿರತೆ ಹಲ್ಲುಗಳನ್ನು ಹೊಂದಿದ ಆರೋಪದಡಿ ಆತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.