ಬಂಧನ
(ಪ್ರಾತಿನಿಧಿಕ ಚಿತ್ರ)
ಮುಂಬೈ: ದೆಹಲಿ–ಶಿರಡಿ ಇಂಡಿಗೊ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿರಡಿ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನದ ಶೌಚಾಲಯದ ಬಳಿ ಆರೋಪಿಯು ಗಗನಸಖಿಯನ್ನು ಅನುಚಿತವಾಗಿ ಮುಟ್ಟಿ, ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಯಾಣಿಕನ ಅನುಚಿತ ವರ್ತನೆಯಿಂದ ನೊಂದ ಗಗನಸಖಿ ಸಿಬ್ಬಂದಿ ವ್ಯವಸ್ಥಾಪಕರಿಗೆ ಮಾಹಿತಿ ನೀಡಿದ್ದಾರೆ. ಶಿರಡಿ ವಿಮಾನ ನಿಲ್ದಾಣದಲ್ಲಿ ಆತನನ್ನು ಬಂಧಿಸಿ ರಹತಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆಯಲ್ಲಿ ಆತ ಮದ್ಯ ಸೇವಿಸಿರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕಾರ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.