ADVERTISEMENT

ಶಬರಿಮಲೆ: ನಿರ್ಬಂಧ ತೆರವು ಸದ್ಯಕ್ಕಿಲ್ಲ

ಪಿಟಿಐ
Published 6 ಡಿಸೆಂಬರ್ 2018, 19:29 IST
Last Updated 6 ಡಿಸೆಂಬರ್ 2018, 19:29 IST
   

ತಿರುವನಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಆವರಣ ಪ್ರವೇಶ ಸಂಬಂಧ ಜಾರಿಗೊಳಿಸಿರುವ ನಿರ್ಬಂಧಗಳನ್ನು ಹಿಂದಕ್ಕೆ ಪಡೆಯಲು ಸಾಧ್ಯವಿಲ್ಲ ಎಂದು ಎಲ್‌ಡಿಎಫ್‌ ನೇತೃತ್ವದ ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.

ನಿರ್ಬಂಧ ಹೇರಿರುವುದರಿಂದ ಭಕ್ತರಿಗೆ ತೊಂದರೆಯಾಗುತ್ತಿದ್ದು, ತಕ್ಷಣವೇ ತೆರವುಗೊಳಿಸಬೇಕು ಹಾಗೂ ಭಕ್ತರಿಗೆ ಇನ್ನಷ್ಟು ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳ ಮೂವರು ಶಾಸಕರ ವಿಧಾನಸಭೆಯಲ್ಲಿ ನಡೆಸುತ್ತಿರುವ ಸತ್ಯಾಗ್ರಹ 4ನೇ ದಿನಕ್ಕೆ ಕಾಲಿಟ್ಟಿದೆ.ಆದರೆ, ಸರ್ಕಾರ ಪ್ರತಿಭಟನೆಗೆ ಮಣಿದಿಲ್ಲ.

‘ಮಹಿಳೆಯರು ದೇವಸ್ಥಾನ ಪ್ರವೇಶಿಸಲು ಈಗ ಅನುಕೂಲಕರವಾದ ಪರಿಸ್ಥಿತಿ ಇಲ್ಲ. 10ರಿಂದ 50 ವರ್ಷದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡುವ ಸಲುವಾಗಿ ಯಾವುದೇ ಕಾಯ್ದೆ ತರುವ ಯೋಚನೆಯನ್ನು ಸರ್ಕಾರ ಮಾಡಿಲ್ಲ ಎಂದು ಮುಜರಾಯಿ ಸಚಿವ ಕಡಕಂಪಳ್ಳಿ ಸುರೇಂದ್ರನ್‌ವಿಧಾನಸಭೆಯಲ್ಲಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.