ಸುಪ್ರೀಂ ಕೋರ್ಟ್–ಪಿಟಿಐ ಚಿತ್ರ
ನವದೆಹಲಿ: ‘ಉಗ್ರರಿಗೆ ಹಣಕಾಸಿನ ನೆರವು ನೀಡಿದ ಪ್ರಕರಣದಲ್ಲಿ ಬಂಧಿಸಲಾಗಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಶಾಬಿರ್ ಅಹಮದ್ ಶಾ ಅವರು ಮೇಲೆ ಇನ್ನೂ 24 ಪ್ರಕರಣಗಳಿವೆ. ಈ ಪ್ರಕರಣಗಳಲ್ಲಿ ಇವರನ್ನು ಯಾಕೆ ಬಂಧಿಸಲಾಗಿದೆ ಎಂಬ ಮಾಹಿತಿ ನೀಡಿ’ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿತು.
ಜೂನ್ 12ರಂದು ಶಾ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಶಾ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ನ್ಯಾಯಮೂರ್ತಿಗಳಾದ ವಿಕ್ರಂ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.