ADVERTISEMENT

ದೆಹಲಿ ಕೊರೊನಾ ಸೋಂಕು: ಸರ್ವ ಪಕ್ಷ ನಾಯಕರ ಜತೆ ಅಮಿತ್‌ ಶಾ ಸಭೆ

ಪಿಟಿಐ
Published 15 ಜೂನ್ 2020, 7:23 IST
Last Updated 15 ಜೂನ್ 2020, 7:23 IST
ಕೇಂದ್ರ ಸಚಿವ ಅಮಿತ್‌ ಶಾ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌–ಸಾಂದರ್ಭಿಕ ಚಿತ್ರ
ಕೇಂದ್ರ ಸಚಿವ ಅಮಿತ್‌ ಶಾ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌–ಸಾಂದರ್ಭಿಕ ಚಿತ್ರ   

ನವದೆಹಲಿ: ಕೊರೊನಾ ಸೋಂಕು ಪ್ರಸರಣ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸೋಮವಾರ ಇಲ್ಲಿ ಸರ್ವ ಪಕ್ಷಗಳ ನಾಯಕರ ಸಭೆ ನಡೆಸಿದರು.

ದೆಹಲಿಯಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಸಭೆ ನಡೆಯಿತು. ಸೋಂಕು ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ದೆಹಲಿಯ ನಾಲ್ಕು ಪ್ರಮುಖ ರಾಜಕೀಯ ಪಕ್ಷಗಳ ನಾಯಕರಿಗೆ ಶಾ ಮಾಹಿತಿ ನೀಡಿದರು. ಅಲ್ಲದೆ ಈ ನಾಯಕರುಗಳಿಂದಲೂ ವಿವರ ಪಡೆದುಕೊಂಡರು ಎಂದು ಗೃಹ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.

ಬಿಜೆಪಿ, ಕಾಂಗ್ರೆಸ್‌, ಎಎಪಿ ಮತ್ತು ಬಿಎಸ್‌ಪಿ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ದೆಹಲಿಯಲ್ಲಿ 41 ಸಾವಿರ ಮಂದಿಗೆ ಸೋಂಕು ತಗುಲಿದ್ದು 1,300ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಅತಿ ಹೆಚ್ಚು ಕೋವಿಡ್‌ ಪೀಡಿತರ ಸಂಖ್ಯೆಯ ಪಟ್ಟಿಯಲ್ಲಿ ಮಹಾರಾಷ್ಟ್ರ ಮತ್ತು ತಮಿಳುನಾಡಿನ ನಂತರ ಮೂರನೇ ಸ್ಥಾನದಲ್ಲಿ ದೆಹಲಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.