ADVERTISEMENT

ಮೋದಿ ಸರ್ಕಾರವಿರುವವರೆಗೂ ಭಾರತದ ಒಂದಿಂಚು ಭೂಮಿ ಕಬಳಿಸಲು ಸಾಧ್ಯವಿಲ್ಲ: ಅಮಿತ್ ಶಾ

ಪಿಟಿಐ
Published 13 ಡಿಸೆಂಬರ್ 2022, 8:51 IST
Last Updated 13 ಡಿಸೆಂಬರ್ 2022, 8:51 IST
   

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇರುವವರೆಗೂ ಯಾರೊಬ್ಬರೂ ಭಾರತದ ಒಂದಿಂಚು ಭೂಮಿಯನ್ನೂ ಕಬಳಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ಮತ್ತು ಭಾರತ ಸೇನಾ ಸಂಘರ್ಷದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ವಿರೋಧ ಪಕ್ಷಗಳು ಮಾಡಿರುವ ಆಗ್ರಹ ಕುರಿತಂತೆ ಶಾ ಈ ರೀತಿ ಪ್ರತಿಕ್ರಿಯಿಸಿದ್ಧಾರೆ.

ಸಂಸತ್ತಿನ ಹೊರಗಡೆ ಸುದ್ದಿಗಾರರ ಜೊತೆ ಮಾತನಾಡಿದ ಶಾ, ರಾಜೀವ್ ಗಾಂಧಿ ಫೌಂಡೇಶನ್ ರದ್ದು ಕುರಿತಾದ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್, ಗಡಿ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದೆ ಎಂದು ಹೇಳಿದರು.

ADVERTISEMENT

ರಾಜೀವ್ ಗಾಂಧಿ ಫೌಂಡೇಶನ್‌ಗೆ (ಆರ್‌ಜಿಎಫ್) ಚೀನಾ ರಾಯಭಾರ ಕಚೇರಿಯಿಂದ ₹ 1.35 ಕೋಟಿ ಬಂದಿದೆ ಎಂದು ಅವರು ಆರೋಪಿಸಿದ್ದಾರೆ. ಇದು ಎಫ್‌ಸಿಆರ್‌ಎ(ವಿದೇಶಿ ಕೊಡುಗೆ ನಿಯಂತ್ರಣ ಕಾಯಿದೆ)ನಿಯಮಗಳಿಗೆ ಅನುಸಾರವಾಗಿಲ್ಲದ ಕಾರಣ ಫೌಂಡೇಶನ್‌ನ ನೋಂದಣಿಯನ್ನು ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದರು.

‘ನೆಹರೂ ಅವರ ಚೀನಾದ ಮೇಲಿನ ಪ್ರೀತಿಯಿಂದಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸ್ಥಾನವನ್ನು ತ್ಯಾಗ ಮಾಡಲಾಗಿತ್ತು’ಎಂದು ಶಾ ಹೇಳಿದರು.

ಭಾರತೀಯ ಸೈನಿಕರ ಶೌರ್ಯವನ್ನು ಶ್ಲಾಘಿಸಿದ ಅವರು, ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ನಮ್ಮ ಒಂದಿಂಚು ಭೂಮಿಯನ್ನು ಯಾರೂ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತೇನೆ ಎಂದು ಶಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.