ADVERTISEMENT

ಸಿಎಎ ವಿರೋಧಿ ಹೋರಾಟಗಾರ್ತಿ ಬಿಲ್ಕಿಸ್‌ ’ಪ್ರಭಾವಿ ಮಹಿಳೆ‘

ಪಿಟಿಐ
Published 23 ಸೆಪ್ಟೆಂಬರ್ 2020, 22:29 IST
Last Updated 23 ಸೆಪ್ಟೆಂಬರ್ 2020, 22:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ:ಸಿಎಎ ವಿರೋಧಿಸಿ ದೆಹಲಿಯ ಶಾಹೀನ್‌ ಬಾಗ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ, 82 ವರ್ಷದ ಮಹಿಳೆ ಬಿಲ್ಕಿಸ್‌ ಅವರನ್ನು 2020ನೇ ವರ್ಷದ 100 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪೈಕಿ ಒಬ್ಬರು ಎಂದು ಟೈಮ್ಸ್‌ ನಿಯತಕಾಲಿಕೆ ಗುರುತಿಸಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಾಲಿವುಡ್‌ ನಟ ಆಯುಷ್ಮಾನ್‌ ಖುರಾನಾ ಅವರಿಗೂ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.

ಸಿಎಎ ವಿರೋಧಿಸಿ ಕಳೆದ ಡಿಸೆಂಬರ್‌ನಲ್ಲಿ ಆರಂಭಗೊಂಡ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಿಲ್ಕಿಸ್‌, ಮಳೆ, ಚಳಿಯನ್ನು ಲೆಕ್ಕಿಸದೇ ಹೋರಾಟದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಈ ಹೋರಾಟದ ಮುಖವೆಂದೇ ಗುರುತಿಸಿಕೊಂಡರು.

ADVERTISEMENT

ಕೋವಿಡ್‌–19 ವ್ಯಾಪಕವಾಗುತ್ತಿದ್ದ ಕಾರಣ, ಶಾಹೀನ್‌ ಬಾಗ್‌ನಲ್ಲಿ ನಡೆಯುತ್ತಿದ್ದ ಹೋರಾಟವನ್ನು ಮಾರ್ಚ್‌ನಲ್ಲಿ ಮೊಟಕುಗೊಳಿಸಲಾಯಿತು. ನಂತರ, ಕೊರೊನಾ ಸೋಂಕು ಪ್ರಸರಣವನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್‌ಡೌನ್‌ ಜಾರಿಗೊಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.