ADVERTISEMENT

ಶಾಲಿಮಾರ್ ರೈಲಿನಲ್ಲಿ ಬೆಂಕಿ: ಪ್ರಯಾಣಿಕರು ಪಾರು

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2022, 7:44 IST
Last Updated 5 ನವೆಂಬರ್ 2022, 7:44 IST
ರೈಲಿನಲ್ಲಿ ಬೆಂಕಿ
ರೈಲಿನಲ್ಲಿ ಬೆಂಕಿ   

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಬಳಿ ಶಾಲಿಮಾರ್ ಎಲ್‌ಟಿಟಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದುಕೇಂದ್ರ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಶನಿವಾರ ಬೆಳಗ್ಗೆ 8.40ರ ಸುಮಾರಿಗೆ ರೈಲಿನ ಲಗೇಜ್‌ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಭದ್ರತಾ ಸಿಬ್ಬಂದಿ ರೈಲು ನಿಲ್ಲಿಸಿ ಬೆಂಕಿ ನಂದಿಸಿದರು ಎಂದು ವರದಿಯಾಗಿದೆ.

ಘಟನೆಯಲ್ಲಿ ಪ್ರಯಾಣಿಕರ ಬೋಗಿಗಳಿಗೆ ಬೆಂಕಿ ವ್ಯಾಪಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಘಟನೆ ಕುರಿತಂತೆ ರೈಲ್ವೆ ಅಧಿಕಾರಿಗಳು ತನಿಖೆಗೆ ಆದೇಶ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.