ADVERTISEMENT

ಅಯೋಧ್ಯೆಯಲ್ಲಿ ಶಂಕರಾಚಾರ್ಯರ ಮಂದಿರ: ಪ್ರಸ್ತಾವನೆ

ಪ್ರಧಾನಿ ಭೇಟಿ ಮಾಡಿದ ಸ್ವಾಮೀಜಿಗಳ ನಿಯೋಗ

​ಪ್ರಜಾವಾಣಿ ವಾರ್ತೆ
Published 29 ಜನವರಿ 2022, 19:30 IST
Last Updated 29 ಜನವರಿ 2022, 19:30 IST
ಯಡತೊರೆಯ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಶ್ರೀ ಶಂಕರಭಾರತೀ ಸ್ವಾಮೀಜಿ ನೇತೃತ್ವದ ಮಠಾಧೀಶರ ನಿಯೋಗವು ನವದೆಹಲಿಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿತು
ಯಡತೊರೆಯ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಶ್ರೀ ಶಂಕರಭಾರತೀ ಸ್ವಾಮೀಜಿ ನೇತೃತ್ವದ ಮಠಾಧೀಶರ ನಿಯೋಗವು ನವದೆಹಲಿಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿತು   

ನವದೆಹಲಿ: ಮೈಸೂರು ಜಿಲ್ಲೆಯ ಕೃಷ್ಣರಾಜನಗರದ ಯಡತೊರೆಯ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಶ್ರೀ ಶಂಕರಭಾರತೀ ಸ್ವಾಮೀಜಿ ನೇತೃತ್ವದ ನಿಯೋಗವು ಶನಿವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿತು.

ಅಯೋಧ್ಯೆಯ ರಾಮಜನ್ಮ ಭೂಮಿ ಪ್ರದೇಶದ ಬಳಿ ಆದಿ ಶಂಕರಾಚಾರ್ಯರ ಮಂದಿರ ನಿರ್ಮಾಣದ ಅಗತ್ಯವನ್ನು ಪ್ರಧಾನಿ ಜೊತೆ ಚರ್ಚಿಸಲಾಯಿತು ಎಂದು ಶ್ರೀ ಶಂಕರಭಾರತೀ ಸ್ವಾಮೀಜಿ ಅವರು ಭೇಟಿ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಅಲ್ಲದೆ, ಅಯೋಧ್ಯೆಯಲ್ಲಿ ಅದ್ವೈತ ಮತ್ತು ಭಾರತೀಯ ತತ್ವಶಾಸ್ತ್ರ ಕುರಿತ ಅಧ್ಯಯನ ಪೀಠ ಹಾಗೂ ಸಂಶೋಧನಾ ಸಂಸ್ಥೆ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಲಾಯಿತು. ಈ ಸಂಬಂಧ ಅಯೋಧ್ಯೆಯ ಸರಯೂ ನದಿ ದಂಡೆಯಲ್ಲಿ 15 ಎಕರೆ ಜಮೀನನ್ನು ಮಂಜೂರು ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.