ADVERTISEMENT

ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶರದ್‌ಪವಾರ್ ‌ಆಸ್ಪತ್ರೆಯಿಂದ ಮನೆಗೆ

ಪಿಟಿಐ
Published 15 ಏಪ್ರಿಲ್ 2021, 10:01 IST
Last Updated 15 ಏಪ್ರಿಲ್ 2021, 10:01 IST
   

ಮುಂಬೈ: ಮೂರು ದಿನಗಳ ಹಿಂದೆ ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಗುರುವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ಪಕ್ಷದ ವಕ್ತಾರ ನವಾಬ್ ಮಲಿಕ್ ಹೇಳಿದ್ದಾರೆ.

80 ವರ್ಷದ ಶರದ್‌ ಪವಾರ್‌ ಅವರಿಗೆ ಸೋಮವಾರ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದಾದ ನಂತರ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ವೈದ್ಯರ ಆರೈಕೆಯೊಂದಿಗೆ ವಿಶ್ರಾಂತಿ ಪಡೆದಿದ್ದರು.

ಪವಾರ್ ಅವರು ಇನ್ನೂ ಕೆಲವು ದಿನಗಳ ಕಾಲ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮಲಿಕ್ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.