ADVERTISEMENT

ಶರದ್ ಪವಾರ್ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2022, 14:19 IST
Last Updated 7 ನವೆಂಬರ್ 2022, 14:19 IST

ಮುಂಬೈ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಸೋಮವಾರ ಬಿಡುಗಡೆ ಮಾಡಲಾಗಿದೆ.

ಕಳೆದ ವಾರ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒತ್ತಡ ಮತ್ತು ಬಳಲಿಕೆಯಿಂದ ಅವರ ಅಸ್ವಸ್ಥಗೊಂಡಿದ್ದರು ಎಂದು ವೈದ್ಯರು ಮಾಹಿತಿ ಹೇಳಿದ್ದರು.

ಶರದ್‌ ಪವಾರ್‌ ಸಂಪೂರ್ಣವಾಗಿ ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.