

ಮುಂಬೈ: ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ, ಪವಾರ್ ಕುಟುಂಬದ ಹಿರಿಯ ನಾಯಕ ಶರದ್ ಪವಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಪುಣೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶರದ್ ಪವಾರ್ ಅವರು ಪುಣೆಯ ರೂಬಿ ಕ್ಲಿನಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
85 ವರ್ಷದ ಪವಾರ್ ಅವರು ಕೆಲ ದಿನಗಳಿಂದ ಗಂಟಲು ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಪವಾರ್ ಕುಟುಂಬದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.
ಎರಡು ವಾರದ ಹಿಂದೆ ಪವಾರ್ ಅವರ ಸಹೋದರಳಿಯ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.