
ಪ್ರಜಾವಾಣಿ ವಾರ್ತೆ
ಪುಣೆ: ಎದೆ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿರುವ ಕಾರಣ ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ (85) ಅವರನ್ನು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
ಉಸಿರಾಟದ ಸಮಸ್ಯೆ ಮತ್ತು ನಿರಂತರ ಕೆಮ್ಮಿನಿಂದ ಬಳಲುತ್ತಿರುವ ಪವಾರ್ ಅವರನ್ನು ಬಾರಾಮತಿ ಪಟ್ಟಣದಲ್ಲಿನ ಅವರ ನಿವಾಸದಿಂದ ಪುಣೆಯ ಆಸ್ಪತ್ರೆಗೆ ಕರೆತರಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲಾಗಿದೆ. ಪವಾರ್ ಎದೆ ಭಾಗದಲ್ಲಿ ಸೋಂಕು ಇರುವುದು ಸಿ.ಟಿ ಸ್ಕ್ಯಾನ್‌ನಲ್ಲಿ ಪತ್ತೆಯಾಗಿದೆ. ಅವರ ಹೃದಯ ಬಡಿತ ಮತ್ತು ಆಮ್ಲಜನಕದ ಮಟ್ಟಗಳು ಸ್ಥಿರವಾಗಿವೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.