ಮುಂಬೈ: ಸಾಮಾಜಿಕ ಚಿಂತಕ ನರೇಂದ್ರ ದಾಭೋಲ್ಕರ್ ಹತ್ಯೆಯ ತನಿಖೆಯಂತೆನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಕೂಡ ತನಿಖೆಯಾಗದುಎಂದು ಎನ್‌ಸಿಪಿ ನಾಯಕ ಶರದ್ ಪವಾರ್ ಗುರುವಾರ ಟ್ವೀಟ್ ಮಾಡಿದ್ದಾರೆ.
ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ವಹಿಸಿದ ಬೆನ್ನಲೇ ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ.
ಸಿಬಿಐ 2014 ರಿಂದಲೂ ನರೇಂದ್ರ ದಾಭೋಲ್ಕರ್ ಅವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದು ಅದು ಇನ್ನೂ ಪೂರ್ಣವಾಗಿಲ್ಲ. ಇದರಂತೆಸುಶಾಂತ್ ಸಿಂಗ್ ಪ್ರಕರಣದತನಿಖೆಯೂಕೂಡ ನಡೆಯುವುದಿಲ್ಲ ಎಂದು ಭಾವಿಸುತ್ತೇನೆ ಎಂದುಪವಾರ್ ಟ್ವೀಟ್ ಮಾಡಿದ್ದಾರೆ.
ದಾಭೋಲ್ಕರ್ ಪ್ರಕರಣದ ತನಿಖೆಯಂತೇ ಇದು ಸಹತನಿಖೆಯಾಗುವುದಿಲ್ಲ ಎಂದು ಪವಾರ್ ಸಿಬಿಐ ಅನ್ನು ಉದ್ದೇಶಿಸಿಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.
ಆದಾಗ್ಯೂ, ಮಹಾರಾಷ್ಟ್ರ ಸರ್ಕಾರ ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.