ADVERTISEMENT

ಎನ್‌ಸಿಪಿ–ಕಾಂಗ್ರೆಸ್ ವಿಲೀನ ಇಲ್ಲ ಪವಾರ್‌ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2019, 18:40 IST
Last Updated 1 ಜೂನ್ 2019, 18:40 IST
   

ಮುಂಬೈ: ‘ಎನ್‌ಸಿಪಿಯು ಕಾಂಗ್ರೆಸ್‌ನಲ್ಲಿ ವಿಲೀನವಾಗುವುದಿಲ್ಲ’ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಶನಿವಾರ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಎರಡು ದಿನಗಳಿಂದ ಊಹಾಪೋಹ ಹರಡಿತ್ತು.

ಲೋಕಸಭಾ ಚುನಾವಣೆ ಫಲಿತಾಂಶದ ಪರಾಮರ್ಶೆ ನಡೆಸುವುದು ಮತ್ತು ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೆ ಸಿದ್ಧತೆ ಕುರಿತು ಚರ್ಚಿಸಲು ಸೇರಿದ್ದ ಎನ್‌ಸಿಪಿ ಸಭೆಯಲ್ಲಿ ಅವರು ಮಾತನಾಡಿದವರು. ‘ಕಾಂಗ್ರೆಸ್‌–ಎನ್‌ಸಿಪಿ ಮೈತ್ರಿ ಮುಂದುವರಿಯಬಾರದು ಎಂಬ ಉದ್ದೇಶದಿಂದ ಮಾಧ್ಯಮದ ಒಂದು ವರ್ಗ ಇಂಥ ವದಂತಿ ತೇಲಿಬಿಡುತ್ತಿದೆ’ ಎಂದು ಆರೋಪಿಸಿದರು.

ಗುರುವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಪವಾರ್‌ ಅವರನ್ನು ಭೇಟಿಮಾಡಿ ಮಾತುಕತೆ ನಡೆಸಿದ್ದರು. ಇದಾಗುತ್ತಿದ್ದಂತೆ ‘ಎನ್‌ಸಿಪಿಯು ಕಾಂಗ್ರೆಸ್‌ನಲ್ಲಿ ವಿಲೀನವಾಗುತ್ತದೆ’ ಎಂಬ ವದಂತಿ ಹಬ್ಬಿತ್ತು. ಲೋಕಸಭೆಯಲ್ಲಿ ಕಾಂಗ್ರೆಸ್‌ 52 ಸ್ಥಾನ ಹಾಗೂ ಎನ್‌ಸಿಪಿ 5 ಸ್ಥಾನ ಹೊಂದಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.