ADVERTISEMENT

ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸುವ ಬಗ್ಗೆ ಸ್ಪಷ್ಟನೆ ನೀಡಿದ ಶರದ್ ಪವಾರ್

ಪಿಟಿಐ
Published 23 ಅಕ್ಟೋಬರ್ 2022, 9:36 IST
Last Updated 23 ಅಕ್ಟೋಬರ್ 2022, 9:36 IST
 ಶರದ್ ಪವಾರ್
ಶರದ್ ಪವಾರ್   

ಬಾರಾಮತಿ (ಮಹಾರಾಷ್ಟ್ರ): ಕಾಂಗ್ರೆಸ್ ಕೈಗೊಂಡಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಬಾರಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದಲ್ಲಿ ಭಾರತ್ ಜೋಡೊ ಯಾತ್ರೆ ನಡೆಯುತ್ತಿದೆ. ಅದಕ್ಕೆ ಜನರ ಪ್ರತಿಕ್ರಿಯೆ ಉತ್ತಮವಾಗಿದೆ. ದೇಶದಲ್ಲಿ ಸಾಮರಸ್ಯ ತರುವ ಉದ್ದೇಶದಿಂದ ನಡೆಯುತ್ತಿರುವ ಯಾತ್ರೆಯಲ್ಲಿ ನಾವೂ ಕೂಡ ಭಾಗವಹಿಸುತ್ತೇವೆ ಎಂದು ಶರದ್ ಪವಾರ್ ಸ್ಪಷ್ಟಪಡಿಸಿದರು.

ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ಭಾನುವಾರ ಶರದ್ ಪವಾರ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ADVERTISEMENT

ಸದ್ಯ ತೆಲಂಗಾಣದಲ್ಲಿರುವ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಜೋಡೊ ಯಾತ್ರೆಯು ನವೆಂಬರ್ 7 ರಂದು ಮಹಾರಾಷ್ಟ್ರ ಪ್ರವೇಶ ಮಾಡಲಿದೆ.

ಅಧಿಕಾರ ಕಳೆದುಕೊಂಡರು ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸಮರ್ಥವಾಗಿ ಹೋರಾಡುತ್ತಿದ್ದಾರೆ. ಅದರಿಂದ ಜನರಿಗೆ ಲಾಭವಾದರೆ ಅವರು ಹೋರಾಡುವುದರಲ್ಲಿ ತಪ್ಪಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪವಾರ್ ಉತ್ತರಿಸಿದರು.

ಸಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಅರಂಭವಾದ ಭಾರತ ಜೋಡೊ ಯಾತ್ರೆಯು 3570 ಕಿಮೀ ಕ್ರಮಿಸಿ ಜಮ್ಮು ಮತ್ತು ಕಾಶ್ಮೀರ ತಲುಪುವ ಗುರಿ ಹಾಕಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.