ADVERTISEMENT

2024ರ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳು ಒಟ್ಟಾಗಿ ಸ್ಪರ್ಧಿಸಬೇಕು: ಪವಾರ್‌

ಪಿಟಿಐ
Published 10 ಜುಲೈ 2022, 15:27 IST
Last Updated 10 ಜುಲೈ 2022, 15:27 IST

ಔರಂಗಬಾದ್‌: ‘ಮಹಾ ವಿಕಾಸ ಆಘಾಡಿ (ಎಂವಿಎ) ಮೈತ್ರಿಕೂಟದ ಮೂರು ಪಕ್ಷಗಳೂ 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹೇಳಿದ್ದಾರೆ.

‘ನಮ್ಮ ಪಕ್ಷದ ನಾಯಕರು, ಶಿವಸೇನಾ ಹಾಗೂ ಕಾಂಗ್ರೆಸ್‌ ಪಕ್ಷಗಳ ನಾಯಕರ ಜೊತೆ ಚರ್ಚಿಸಿದ ನಂತರ ಈ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದು ತಿಳಿಸಿದ್ದಾರೆ.

‘ತಾವು ಬಂಡಾಯ ಎದ್ದಿರುವುದಕ್ಕೆ ನಿರ್ದಿಷ್ಟ ಕಾರಣವನ್ನು ಶಿವಸೇನಾ ಶಾಸಕರು ನೀಡಿಲ್ಲ. ತಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಕೆಲವರು ಆರೋಪಿಸಿದ್ದಾರೆ. ಪಕ್ಷವು ಹಿಂದುತ್ವದ ಹಾದಿಯಿಂದ ವಿಮುಖವಾಗುತ್ತಿದೆ ಎಂದೂ ಕೆಲವರು ದೂರಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.