ADVERTISEMENT

ಇದೇ 25ರಂದು ಐಎನ್‌ಎಲ್‌ಡಿ ರ‍್ಯಾಲಿ: ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ?

ಪಿಟಿಐ
Published 22 ಸೆಪ್ಟೆಂಬರ್ 2022, 13:02 IST
Last Updated 22 ಸೆಪ್ಟೆಂಬರ್ 2022, 13:02 IST
ನಿತೀಶ್‌ ಕುಮಾರ್
ನಿತೀಶ್‌ ಕುಮಾರ್   

ನವದೆಹಲಿ: ಹರಿಯಾಣದ ಫತೇಹಾಬಾದ್‌ನಲ್ಲಿ ಇದೇ 25ರಂದು ನಡೆಯಲಿರುವ ಭಾರತೀಯ ರಾಷ್ಟ್ರೀಯ ಲೋಕದಳದ (ಐಎನ್‌ಎಲ್‌ಡಿ) ರ‍್ಯಾಲಿಯಲ್ಲಿ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌, ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್, ಶಿವಸೇನಾ ನಾಯಕ ಉದ್ಧವ್‌ ಠಾಕ್ರೆ, ಡಿಎಂಕೆಯ ಕನಿಮೋಳಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಪಾಲ್ಗೊಳ್ಳುವರು ಎಂದು ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಗುರುವಾರ ಹೇಳಿದ್ದಾರೆ.

ಐಎನ್‌ಎಲ್‌ಡಿ ಸಂಸ್ಥಾಪಕ ದೇವಿ ಲಾಲ್‌ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿರುವ ರ್‍ಯಾಲಿಯಲ್ಲಿ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌, ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಫಾರೂಖ್‌ ಅಬ್ದುಲ್ಲಾ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರೂ ಭಾಗವಹಿಸುವ ಸಾಧ್ಯತೆ ಇದೆ ಎಂದಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳ ಸಮಾನ ಮನಸ್ಕ ನಾಯಕರು ಒಟ್ಟು ಸೇರುತ್ತಿರುವುದರಿಂದ ಈ ರ್‍ಯಾಲಿ ಮಹತ್ವ ಪಡೆದಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.