ADVERTISEMENT

ಶರದ್‌ ಪವಾರ್‌ಗೆ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ

ಪಿಟಿಐ
Published 12 ಏಪ್ರಿಲ್ 2021, 8:17 IST
Last Updated 12 ಏಪ್ರಿಲ್ 2021, 8:17 IST
ಶರದ್‌ ಪವಾರ್‌
ಶರದ್‌ ಪವಾರ್‌   

ಮುಂಬೈ:‘ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ’ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ತಿಳಿಸಿದರು.

ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಶರದ್‌ ಪವಾರ್‌ ಅವರನ್ನು ಭಾನುವಾರ ದಾಖಲಿಸಲಾಗಿತ್ತು.

ಡಾ. ಬಲ್ಸಾರ್‌ ಅವರು ಯಶ್ವಸಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಪವಾರ್‌ ಅವರ ಆರೋಗ್ಯದ ಪರಿಸ್ಥಿತಿ ಸ್ಥಿರವಾಗಿದೆ ಎಂದು ಮಲಿಕ್‌ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.