
ಪ್ರಜಾವಾಣಿ ವಾರ್ತೆನವದೆಹಲಿ: 2019ರ ಜಾಮಿಯ ಗಲಭೆಗೆ ಪ್ರಚೋದನೆ ನೀಡಿದ ದೇಶದ್ರೋಹ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಶಾರ್ಜಿಲ್ ಇಮಾಮ್‌ಗೆ ದೆಹಲಿ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶಅನುಜ್ ಅಗರವಾಲ್ ಜಾಮೀನು ಮಂಜೂರು ಮಾಡಿದ್ದಾರೆ.
ನ್ಯೂ ಫ್ರೆಂಡ್ಸ್ ಕಾಲೋನಿ ಪ್ರಕರಣದಲ್ಲಿದೇಶದ್ರೋಹದ ಭಾಷಣ ಮಾಡಿ ಜಾಮಿಯಾ ಗಲಭೆಗೆ ಪ್ರಚೋದನೆ ನೀಡಿದ್ದರೆಂದು ಆರೋಪಿಸಿ ಇಮಾಮ್ ಅವರನ್ನು ಬಂಧಿಸಲಾಗಿತ್ತು. 2020ರಿಂದ ನ್ಯಾಯಾಂಗ ಬಂಧನದಲ್ಲಿರುವ ಇಮಾಮ್, ದೆಹಲಿ ಗಲಭೆ ಸಂಚಿನ ಪ್ರಕರಣದಲ್ಲಿ ಇನ್ನೂ ಜಾಮೀನು ದೊರೆಯದ ಕಾರಣ ಜೈಲಿನಲ್ಲಿಯೇ ಮುಂದುವರಿಯಬೇಕಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.