ADVERTISEMENT

‘ಪ್ರಧಾನಿಯಾಗಲು ರಾಹುಲ್‌ ಅರ್ಹರು’

ಪಿಟಿಐ
Published 30 ಡಿಸೆಂಬರ್ 2018, 20:09 IST
Last Updated 30 ಡಿಸೆಂಬರ್ 2018, 20:09 IST
ಶಶಿ ತರೂರ್‌
ಶಶಿ ತರೂರ್‌   

ನವದೆಹಲಿ : ‘ಅತ್ಯುತ್ತಮ’ ಪ್ರಧಾನಿ ಆಗಲು ಬೇಕಾದ ಎಲ್ಲಾ ಗುಣಗಳನ್ನು ರಾಹುಲ್‌ ಗಾಂಧಿ ಹೊಂದಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್‌ ಭಾನುವಾರ ಹೇಳಿದರು.

ಪ್ರಧಾನಿ ಅಭ್ಯರ್ಥಿ ಯಾರು ಎಂಬ ನಿರ್ಧಾರವನ್ನು ಕಾಂಗ್ರೆಸ್‌ 2019ರ ಲೋಕಸಭಾ ಚುನಾವಣೆ ನಂತರ ತನ್ನ ಮಿತ್ರ ಪಕ್ಷಗಳ ಜತೆ ಚರ್ಚಿಸಿ ನಿರ್ಧರಿಸಲಿದೆ ಎಂದೂ ಅವರು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದರು.

’ರಾಹುಲ್‌ ಗಾಂಧಿ ನಮ್ಮ ನಾಯಕ. ಅಂದರೆ, ಕಾಂಗ್ರೆಸ್‌ ಬಹುಮತ ಗಳಿಸಿದರೆ ಅವರು ನಮ್ಮ ಪ್ರಧಾನಿ ಆಗುತ್ತಾರೆ. ಒಂದು ವೇಳೆ ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ರಚಿಸಬೇಕಾದರೆ, ಒಮ್ಮತದ ನಿರ್ಧಾರಕ್ಕಾಗಿ ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುವುದು ಸ್ಪಷ್ಟ ಎಂದು ಅವರು ಹೇಳಿದರು.

ADVERTISEMENT

ರಾಹುಲ್‌, ಮುಂದಿನ ಪ್ರಧಾನಿಯಾಗಬಹುದು ಎಂದು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್‌ಈಚೆಗೆ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.